bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Exodus 32
Exodus 32
Kannada (ERV) 1997 (ಪರಿಶುದ್ದ ಬೈಬಲ್)
← Chapter 31
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 33 →
1
ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.
2
ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.
3
ಆದ್ದರಿಂದ ಅವರೆಲ್ಲರೂ ತಮ್ಮ ಚಿನ್ನದ ಓಲೆಗಳನ್ನು ತಂದುಕೊಟ್ಟರು.
4
ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.
5
ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.
6
ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.
7
ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.
8
ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.
9
ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.”
10
“ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
11
ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.
12
ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.
13
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಇಸ್ರೇಲನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
14
ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.
15
ಬಳಿಕ ಮೋಶೆ ಬೆಟ್ಟದಿಂದಿಳಿದು ಹೋದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.
16
ಯೆಹೋವನು ತಾನೇ ಆ ಕಲ್ಲುಗಳನ್ನು ಮಾಡಿ ಅವುಗಳ ಮೇಲೆ ಬರೆದಿದ್ದನು.
17
ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ” ಅಂದನು.
18
ಅದಕ್ಕೆ ಮೋಶೆ, “ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಗೋಷ್ಠಿಯ ಧ್ವನಿ” ಎಂದು ಉತ್ತರಿಸಿದನು.
19
ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.
20
ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.
21
ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.
22
ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.
23
ಅವರು ನನಗೆ, ‘ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು’ ಎಂದು ಕೇಳಿದರು.
24
ಆದ್ದರಿಂದ ನಾನು ಅವರಿಗೆ, “ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ’ ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಈ ಬಸವನ ಮೂರ್ತಿಯನ್ನು ಎರಕಹೊಯ್ದೆನು” ಎಂದು ಉತ್ತರಿಸಿದನು.
25
ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!
26
ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.
27
ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ! ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ”‘ ಎಂದು ಹೇಳಿದನು.
28
ಲೇವಿಕುಲದವರು ಮೋಶೆಯ ಮಾತಿಗೆ ವಿಧೇಯರಾದರು. ಅಂದು ಇಸ್ರೇಲರಲ್ಲಿ ಸುಮಾರು ಮೂರು ಸಾವಿರ ಮಂದಿ ಸತ್ತರು.
29
ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡು ಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.
30
ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.
31
ಅಂತೆಯೇ ಮೋಶೆಯು ಯೆಹೋವನ ಬಳಿಗೆ ಮರಳಿ ಹೋಗಿ, “ದಯವಿಟ್ಟು ಆಲಿಸು! ಈ ಜನರು ಬಹಳ ಕೆಟ್ಟ ಪಾಪವನ್ನು ಮಾಡಿದ್ದಾರೆ. ಚಿನ್ನದಿಂದ ಮೂರ್ತಿಯನ್ನು ಮಾಡಿಕೊಂಡಿದ್ದಾರೆ.
32
ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.
33
ಆದರೆ ಯೆಹೋವನು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡುವ ಜನರ ಹೆಸರನ್ನು ಮಾತ್ರವೇ ನನ್ನ ಪುಸ್ತಕದಿಂದ ಅಳಿಸುತ್ತೇನೆ.
34
ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.
35
ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ.
← Chapter 31
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 33 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40