bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Ezekiel 40
Ezekiel 40
Kannada (ERV) 1997 (ಪರಿಶುದ್ದ ಬೈಬಲ್)
← Chapter 39
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 41 →
1
ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.
2
ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಘಹಳ ಉನ್ನತ ಪರ್ವತದ ಬಳಿ ಇರಿಸಿದನು. ನನೆಐದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.
3
ಯೆಹೋವನು ನನ್ನನ್ನು ಅಲ್ಲಿಗೆ ಕರೆತಂದನು. ಅಲ್ಲಿ ಒಬ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆಯ ಕೋಲೂ ಇದ್ದವು. ಅವನು ದ್ವಾರದ ಬಳಿಯಲ್ಲಿ ನಿಂತಿದ್ದನು.
4
ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಙೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”
5
ಆಲಯದ ಹೊರಗಿನಿಂದ ಸುತ್ತಲೂ ಗೋಡೆ ಇರುವದನ್ನು ನಾನು ಕಂಡೆನು. ಅವನ ಕೈಯಲ್ಲಿ ಅಳತೆಯ ಕೋಲಿತ್ತು. ಅದು ಉದ್ದ ಅಳತೆಯಲ್ಲಿ ಉದ್ದವಾಗಿತ್ತು. ಅವನು ಗೋಡೆಯ ಅಗಲವನ್ನು ಅಳತೆ ಮಾಡಿದಾಗ, ಅದು ಒಂದು ಕೋಲು ಅಗಲವಾಗಿತ್ತು. ಅವನು ಗೋಡೆಯ ಎತ್ತರವನ್ನು ಅಳತೆ ಮಾಡಿದಾಗ ಅದು ಒಂದು ಕೋಲು ಎತ್ತರವಾಗಿತ್ತು.
6
ಅವನು ಪೂರ್ವದ ದ್ವಾರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಬಳಿಗೆ ಹೋಗಿ ದ್ವಾರದ ಅಗಲವನ್ನು ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.
7
ದ್ವಾರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಆ ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಙ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು.
8
ಅವನು ಕೈಸಾಲೆಯನ್ನು ಅಳತೆ ಮಾಡಿದನು.
9
ಅದು ಎಂಟು ಮೊಳ ಉದ್ದವಾಗಿತ್ತು. ದ್ವಾರದ ಎರಡು ಘದಿಗಳ ಗೋಡೆಯನ್ನು ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು.
10
ದ್ವಾರದ ಎರಡು ಘದಿಗಳಲ್ಲಿಯೂ ಮೂರು ಸಣ್ಣ ಕೋಣೆಗಳಿದ್ದವು. ಈ ಕೋಣೆಗಳೆಲ್ಲವೂ ಒಂದೇ ಅಳತೆಯುಳ್ಳವುಗಳಾಗಿದ್ದವು. ಅವುಗಳ ಗೋಡೆಗಳೂ ಸಮಾನ ಅಳತೆಯುಳ್ಳವುಗಳಾಗಿದ್ದವು.
11
ಅವನು ದ್ವಾರದ ಪ್ರವೇಶ ಸ್ಥಳವನ್ನು ಅಳತೆಮಾಡಿದಾಗ ಅದು ಹತ್ತು ಮೊಳ ಅಗಲ ಮತ್ತು ಹದಿಮೂರು ಮೊಳ ಉದ್ದವಾಗಿತ್ತು.
12
ಪ್ರತಿ ಕೋಣೆಯೆದುರು ತಗ್ಗಾದ ಗೋಡೆಯಿತ್ತು. ಅದು ಒಂದು ಮೊಳ ಎತ್ತರ, ಒಂದು ಮೊಳ ದಪ್ಪವಾಗಿತ್ತು. ಆ ಕೋಣೆಗಳು ಚೌಕವಾಗಿದ್ದು ಅದರ ಗೋಡೆಯು ಆರು ಮೊಳ ಉದ್ದವಾಗಿತ್ತು.
13
ಅವನು ಆ ಕೋಣೆಯ ಹೊರಭಾಗದ ತುದಿಯಿಂದ ಇನ್ನೊಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಬಾಗಿಲುಗಳು ಎದುರು ಬಂದುರಾಗಿದ್ದವು.
14
ಅವನು ಕೈಸಾಲೆಯ ಎರಡು ಘದಿಗಳ ಗೋಡೆಯನ್ನು ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳದಷ್ಟಿತ್ತು.
15
ಹೊರಗಿನ ಬಾಗಿಲಿನ ಒಳಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು.
16
ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು.
17
ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.
18
ದ್ವಾರದ ಉದ್ದ ಅಳತೆಯಷ್ಟು ನೆಲಗಟ್ಟಿನ ಅಗಲದ ಅಳತೆಯಾಗಿತ್ತು. ನೆಲಗಟ್ಟು ಪ್ರವೇಶ ದ್ವಾರದ ಒಳಗಿನ ತುದಿಯ ತನಕವಿತ್ತು. ಇದು ಕೆಳಗಣ ನೆಲಗಟ್ಟಾಗಿತ್ತು.
19
ಅವನು ಕೆಳಗಣ ಪ್ರವೇಶ ದ್ವಾರದ ಒಳಭಾಗದಿಂದ ಹಿಡಿದು ಒಳಗಿನ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು.
20
ಆಮೇಲೆ ಹೊರಗಿನ ಪ್ರಾಕಾರದ ಗೋಡೆಯಲ್ಲಿದ್ದ ಉತ್ತರ ಪ್ರವೇಶದ್ವಾರದ ಉದ್ದಗಲವನ್ನು ಅವನು ಅಳತೆ ಮಾಡಿದನು.
21
ಈ ಪ್ರವೇಶದ್ವಾರ, ಅಕ್ಕಪಕ್ಕದಲ್ಲಿದ್ದ ಮೂರು ಕೋಣೆಗಳು ಮತ್ತು ಅದರ ಕೈಸಾಲೆಗಳೆಲ್ಲವೂ ಮೊದಲಿನ ಪ್ರವೇಶದ್ವಾರದಂತೆಯೇ ಅಳತೆಯುಳ್ಳವುಗಳಾಗಿತ್ತು. ಪ್ರವೇಶ ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
22
ಅದರ ಕಿಟಕಿಗಳು, ಕೈಸಾಲೆ, ಖರ್ಜೂರ ವೃಕ್ಷದ ಕೆತ್ತನೆ ಕೆಲಸಗಳೆಲ್ಲವೂ ಪೂರ್ವದ ಪ್ರವೇಶದ್ವಾರದಂತೆಯೇ ಇದ್ದವು. ಹೊರಗಿನಿಂದ ಪ್ರವೇಶ ದ್ವಾರಕ್ಕೆ ಬರಲು ಏಳು ಮೆಟ್ಟಿಲುಗಳಿದ್ದವು. ಅದರ ಕೈಸಾಲೆಯು ಪ್ರವೇಶದ್ವಾರದ ಒಳಭಾಗದ ಕೊನೆಯಲ್ಲಿತ್ತು.
23
ಪ್ರಾಕಾರದ ಹೊರಗೆ ಉತ್ತರದ ಪ್ರವೇಶ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಹೋಗಲು ದ್ವಾರವಿತ್ತು. ಇದು ಪೂರ್ವದಲ್ಲಿದ್ದ ದ್ವಾರದಂತಿತ್ತು. ಅವನು ಒಳಗೋಡೆಯ ದ್ವಾರದಿಂದ ಹೊರಗೋಡೆಯ ದ್ವಾರದ ತನಕ ಅಳೆದಾಗ, ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.
24
ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದ್ವಾರವಿರುವದನ್ನು ಕಂಡೆನು. ಅವನು ಒಳಗಿನ ಗೋಡೆಗಳನ್ನೂ ಕೈಸಾಲೆಯನ್ನೂ ಅಳತೆಮಾಡಿದನು. ಅದರ ಅಳತೆ ಬೇರೆ ಪ್ರವೇಶ ದ್ವಾರಗಳಂತೆ ಇದ್ದವು.
25
ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಅಂಥ ಕಿಟಕಿಗಳೇ ಇದ್ದವು. ಆ ಪ್ರವೇಶದ್ವಾರವು ಐವತ್ತು ಮೊಳ ಉದ್ದ ಮತ್ತು ಇಪ್ಪತ್ತೈದು ಮೊಳ ಅಗಲವಿತ್ತು.
26
ಅದರ ಮೇಲೆ ಏರಲು ಏಳು ಮೆಟ್ಟಲುಗಳಿದ್ದವು. ಅದರ ಕೈಸಾಲೆಯು ದ್ವಾರದ ಒಳಗಿನ ಭಾಗದಲ್ಲಿತ್ತು. ಅದರ ಅಕ್ಕಪಕ್ಕದ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.
27
ಒಳಗಿನ ಪ್ರಾಕಾರದ ದಕ್ಷಿಣದಲ್ಲಿ ಒಂದು ದ್ವಾರವಿತ್ತು. ಅವನು ಒಳಗಿನ ಪ್ರಾಕಾರದ ದ್ವಾರದಿಂದ ಹೊರಗಿನ ಪ್ರಾಕಾರದ ದ್ವಾರದ ತನಕ ಅಳತೆ ಮಾಡಿದನು. ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.
28
ಆಮೇಲೆ ಅವನು ದಕ್ಷಿಣದ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಈ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಬೇರೆ ದ್ವಾರಗಳಂತೆಯೇ ಉದ್ದಗಲವಿತ್ತು.
29
ಅದರ ಕೋಣೆಗಳು, ಅಕ್ಕಪಕ್ಕದ ಗೋಡೆಗಳು, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರಗಳ ಪ್ರಕಾರವೇ ಅಳತೆಯಲ್ಲಿದ್ದವು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ಆ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
30
ಕೈಸಾಲೆಯು ಇಪ್ಪತ್ತೈದು ಮೊಳ ಅಗಲ ಐವತ್ತು ಮೊಳ ಉದ್ದವಿತ್ತು.
31
ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು. ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು. ಆ ಪ್ರವೇಶ ದ್ವಾರವನ್ನು ಹತ್ತಲು ಎಂಟು ಮೆಟ್ಟಿಲುಗಳಿದ್ದವು.
32
ಅನಂತರ ಅವನು ಪೂರ್ವದಲ್ಲಿದ್ದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅಲ್ಲಿದ್ದ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಬೇರೆ ದ್ವಾರಗಳ ರೀತಿಯಲ್ಲಿ ಅದರ ಉದ್ದಳತೆಯಿತ್ತು.
33
ಅದರ ಕೋಣೆಗಳು, ಗೋಡೆ, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರದ ಅಳತೆಯಂತೆ ಇದ್ದವು. ದ್ವಾರದ ಸುತ್ತಲೂ ಕೈಸಾಲೆಯ ಮೇಲೂ ಕಿಟಕಿಗಳಿದ್ದವು. ಆ ಪ್ರವೇಶ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
34
ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದ್ವಾರದ ಕೊನೆಯಲ್ಲಿತ್ತು. ದ್ವಾರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಆ ದ್ವಾರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.
35
ಆಮೇಲೆ ಅವನು ನನ್ನನ್ನು ಉತ್ತರದ ಪ್ರವೇಶ ದ್ವಾರಕ್ಕೆ ಕರೆದುಕೊಂಡು ಹೋದನು. ಅವನು ಅದನ್ನು ಅಳತೆ ಮಾಡಿದನು. ಬೇರೆ ದ್ವಾರಗಳಂತೆಯೇ ಅದರ ಅಳತೆಯಿತ್ತು.
36
ಅದರ ಕೋಣೆಗಳು, ಗೋಡೆಗಳು ಮತ್ತು ಕೈಸಾಲೆ ಇವೆಲ್ಲವೂ ಬೇರೆ ದ್ವಾರದ ಅಳತೆಯಂತಿತ್ತು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
37
ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದ್ವಾರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದ್ವಾರವನ್ನು ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.
38
ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.
39
ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.
40
ಈ ಕೈಸಾಲೆಯ ಬಾಗಿಲಿನ ಹೊರಗಿನ ಗೋಡೆಯ ಘದಿಯಲ್ಲಿಯೂ ಎರಡು ಮೇಜುಗಳಿದ್ದವು.
41
ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಘದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನ್ನು ಸಿದ್ಧಪಡಿಸುತ್ತಿದ್ದರು.
42
ಸರ್ವಾಂಗಹೋಮಕ್ಕಾಗಿ ಕಲ್ಲಿನಿಂದ ಮಾಡಿದ ನಾಲ್ಕು ಮೇಜುಗಳಿದ್ದವು. ಈ ಮೇಜುಗಳು ಒಂದೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ, ಒಂದು ಮೊಳ ಎತ್ತರ. ಈ ಮೇಜುಗಳ ಮೇಲೆ ಪಶುಗಳನ್ನು ವಊಸಲು ಉಪಯೋಗಿಸುವ ಉಪಕರಣಗಳನ್ನು ಯಾಜಕರು ಇಡುತ್ತಿದ್ದರು.
43
ಈ ಸ್ಥಳದ ಗೋಡೆಯಲ್ಲಿ ಸುತ್ತಲೂ ಮೂರು ಇಂಚು ಉದ್ದದ ಮಾಂಸವನ್ನು ಸಿಕ್ಕಿಸುವ ಕೊಂಡಿಗಳಿದ್ದವು. ಯಜ್ಞದ ಮಾಂಸವು ಈ ಮೇಜುಗಳ ಮೇಲಿತ್ತು.
44
ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು.
45
ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.
46
ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಘಹುದು” ಎಂದು ಹೇಳಿದನು.
47
ಅವನು ಒಳಗಿನ ಪ್ರಾಕಾರವನ್ನು ಅಳತೆ ಮಾಡಿದನು. ಅದು ಚೌಕವಾಗಿದ್ದು ನೂರು ಮೊಳ ಉದ್ದ, ನೂರು ಮೊಳ ಅಗಲವಿತ್ತು. ಈ ಯಜ್ಞವೇದಿಕೆಯು ಆಲಯದ ಮುಂಭಾಗದಲ್ಲಿತ್ತು.
48
ಆಮೇಲೆ ಅವನು ಆಲಯದ ಕೈಸಾಲೆಗೆ ನನ್ನನ್ನು ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿಯೂ ಇರುವ ಗೋಡೆಗಳನ್ನು ಅವನು ಅಳತೆ ಮಾಡಲಾಗಿ ಗೋಡೆಯು ಐದು ಮೊಳ ದಪ್ಪ, ಮೂರು ಮೊಳ ಅಗಲವಾಗಿತ್ತು. ಅದರ ಮಧ್ಯದ ಸ್ಥಳ ಹದಿನಾಲ್ಕು ಮೊಳವಿತ್ತು.
49
ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನೆಐರಡು ಮೊಳ ಉದ್ದವಾಗಿತ್ತು. ಆ ಕೈಸಾಲೆಯನ್ನು ಹತ್ತಲು ಹತ್ತು ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ ಗೋಡೆಗಳಿಗೆ ಸ್ತಂಭಗಳಿದ್ದವು.
← Chapter 39
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 41 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
Recommended Reading
Commentary
Ezekiel Commentaries
→
Devotional
Ezekiel Devotional Guide
→
Get This Bible
ERV Study Bible
→