bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Genesis 17
Genesis 17
Kannada (ERV) 1997 (ಪರಿಶುದ್ದ ಬೈಬಲ್)
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 18 →
1
ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.
2
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವುದಾಗಿ ವಾಗ್ದಾನ ಮಾಡುತ್ತೇನೆ” ಎಂದು ಹೇಳಿದನು.
3
ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ,
4
“ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ:
5
‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.
6
ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು.
7
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.
8
ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.
9
ಇದಲ್ಲದೆ ದೇವರು ಅಬ್ರಹಾಮನಿಗೆ, “ನಮ್ಮ ಒಡಂಬಡಿಕೆಯ ಪ್ರಕಾರ ನೀನು ಮತ್ತು ನಿನ್ನ ಸಂತತಿಯವರೆಲ್ಲರೂ ನನ್ನ ಒಡಂಬಡಿಕೆಗೆ ವಿಧೇಯರಾಗಬೇಕು.
10
ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು.
11
ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು. (Verses 11-12)
12
See verse 11
13
ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು. (Verses 13-14)
14
See verse 13
15
ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರಾ.
16
ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.
17
ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.
18
ಆಮೇಲೆ ಅಬ್ರಹಾಮನು ದೇವರಿಗೆ, “ಇಷ್ಮಾಯೇಲನೇ ನಿನ್ನ ಆಶೀರ್ವಾದವನ್ನು ಹೊಂದಿಕೊಂಡು ಜೀವಿಸಬಾರದೇಕೆ?’ ಎಂದು ಕೇಳಿದನು.
19
ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, “ಇಸಾಕ” ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
20
“ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು.
21
ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು.
22
ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು.
23
ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.
24
ಅಬ್ರಹಾಮನು ಸುನ್ನತಿ ಮಾಡಿಸಿಕೊಂಡಾಗ ತೊಂಭತ್ತೊಂಭತ್ತು ವರ್ಷದವನಾಗಿದ್ದನು.
25
ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.
26
ಅಬ್ರಹಾಮನಿಗೂ ಅವನ ಮಗನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
27
ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು.
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 18 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50