bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Hebrews 8
Hebrews 8
Kannada (ERV) 1997 (ಪರಿಶುದ್ದ ಬೈಬಲ್)
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 9 →
1
ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.
2
ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ.
3
ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.
4
ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.
5
ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.
6
ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.
7
ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ.
8
ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ:
9
ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ.
10
ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ:
11
ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ;
12
ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು;
13
ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 9 →
All chapters:
1
2
3
4
5
6
7
8
9
10
11
12
13