bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 11
Jeremiah 11
Kannada (ERV) 1997 (ಪರಿಶುದ್ದ ಬೈಬಲ್)
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 12 →
1
ಯೆರೆಮೀಯನಿಗೆ ಈ ಸಂದೇಶ ಯೆಹೋವನಿಂದ ಬಂದಿತು:
2
“ಯೆರೆಮೀಯನೇ, ಈ ಒಡಂಘಡಿಕೆಯ ವಚನಗಳನ್ನು ಕೇಳು, ಈ ವಿಷಯಗಳ ಬಗ್ಗೆ ಯೆಹೂದದ ಜನರಿಗೂ ಜೆರುಸಲೇಮಿನಲ್ಲಿರುವ ಜನರಿಗೂ ಹೇಳು.
3
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ಈ ಒಡಂಘಡಿಕೆಯನ್ನು ಪಾಲಿಸದೆ ಇದ್ದವರಿಗೆ ಕೇಡಾಗುತ್ತದೆ.’
4
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಘಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಘಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
5
“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.
6
ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಈ ಸಂದೇಶವನ್ನು ಸಾರು. ಈ ಒಡಂಘಡಿಕೆಯಲ್ಲಿನ ಮಾತುಗಳನ್ನು ಕೇಳಿ ಅನುಸರಿಸಿರಿ.
7
ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನೆಐಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನೆಐಚ್ಚರಿಕೆಯನ್ನು ಕೊಟ್ಟೆ. ನನ್ನ ಆಜ್ಞಾಪಾಲನೆ ಮಾಡಙೇಕೆಂದು ಅವರಿಗೆ ಹೇಳಿದೆ.
8
ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಘಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಘಡಿಕೆಯನ್ನು ಪಾಲಿಸಙೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”
9
ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಜನರೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೂ ಒಳಸಂಚನ್ನು ಮಾಡಿದ್ದಾರೆ.
10
ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಘಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”
11
ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.
12
ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಘಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.
13
“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಘಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಘಲಿಪೀಠಗಳಿವೆ.
14
“ಯೆರೆಮೀಯನೇ, ಈ ಯೆಹೂದದ ಜನರಿಗಾಗಿ ಙೇಡಿಕೊಳ್ಳಬೇಡ. ಅವರಿಗಾಗಿ ಮೊರೆಯಿಡಙೇಡ. ಅವರಿಗಾಗಿ ಪ್ರಾರ್ಥನೆ ಮಾಡಿದರೂ ನಾನು ಕೇಳುವದಿಲ್ಲ. ಆ ಜನರು ತೊಂದರೆಯನ್ನು ಅನುಭವಿಸುವರು. ಆಗ ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಕೇಳುವದಿಲ್ಲ.
15
“ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಊಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಘಲಿಯಿಂದ ನಿನ್ನ ವಿನಾಶವನ್ನು ತಡೆಯಘಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಘಹುದೆಂದು ತಿಳಿದುಕೊಂಡಿರುವಿಯಾ?”
16
“ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು.
17
ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”
18
ಅನಾತೋತಿನ ಜನರು ನನ್ನ ವಿರುದ್ಧ ಮಾಡುತ್ತಿರುವ ಕುತಂತ್ರವನ್ನೂ ಮಾಡುವ ಕೃತ್ಯಗಳನ್ನೂ ಯೆಹೋವನು ನನಗೆ ತೋರಿಸಿದನು. ಆದ್ದರಿಂದ ಅವರು ನನ್ನ ವಿರೋಊಗಳೆಂದು ನಾನು ತಿಳಿದುಕೊಂಡೆನು.
19
ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಊಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”
20
ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಙೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.
21
ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಙೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದುಕೊಂಡನು.
22
ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.
23
ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬಂದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52