bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 19
Jeremiah 19
Kannada (ERV) 1997 (ಪರಿಶುದ್ದ ಬೈಬಲ್)
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 20 →
1
ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡುಕೊಂಡು
2
ಬೋಕಿಯ ದ್ವಾರದ ಸಮೀಪದಲ್ಲಿರುವ ಬೆನ್ಹಿನೊಐಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು.
3
ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.
4
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಘಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
5
ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.
6
ಈಗ, ಬೆನ್ಹಿನೊಐಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು ‘ತೋಫೆತ್’ ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು ‘ಕೊಲೆಯ ಕಣಿವೆ’ ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನೆಐಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.
7
ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.
8
ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.
9
ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನ್ನೆ ತಿನ್ನುವರು. ಆಮೇಲೆ ಅವರು ಒಬ್ಬರನೊಐಬ್ಬರು ತಿನ್ನಲು ಪ್ರಾರಂಭಿಸುವರು.’
10
“ಯೆರೆಮೀಯನೇ, ನೀನು ಜನರಿಗೆ ಆ ವಿಷಯಗಳನ್ನು ಹೇಳು. ಅವರು ಗಮನವಿಟ್ಟು ಕೇಳುತ್ತಿರುವಾಗ ಆ ಮಣ್ಣಿನ ಕೊಡವನ್ನು ಒಡೆದುಹಾಕಿ
11
ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.
12
ನಾನು ಈ ಜನರಿಗೂ ಮತ್ತು ಈ ಸ್ಥಳಕ್ಕೂ ಹೀಗೆ ಮಾಡುತ್ತೇನೆ. ನಾನು ಈ ನಗರವನ್ನು ತೋಫೆತಿನಂತೆ ಮಾಡುತ್ತೇನೆ’ ಇದು ಯೆಹೋವನ ನುಡಿ.
13
‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ ‘ಹೊಲಸಾಗುವವು.’ ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.”‘
14
ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಪವಿತ್ರಾಲಯದ ಪ್ರಾಕಾರದಲ್ಲಿ ನಿಂತುಕೊಂಡು, ಎಲ್ಲಾ ಜನರನ್ನುದ್ದೇಶಿಸಿ ಹೀಗೆ ಹೇಳಿದನು:
15
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಘಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’”
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52