bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 22
Jeremiah 22
Kannada (ERV) 1997 (ಪರಿಶುದ್ದ ಬೈಬಲ್)
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 23 →
1
ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು ಸಾರು.
2
‘ಯೆಹೂದದ ರಾಜನೇ, ಯೆಹೋವನಿಂದ ಘಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಊಕಾರಿಗಳು ಚೆನ್ನಾಗಿ ಕೇಳಙೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.
3
ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಘದ್ಧವಾಗಿಯೂ ನ್ಯಾಯಘದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಙೇಡಿ; ನಿರಪರಾಊಗಳನ್ನು ಕೊಲ್ಲಙೇಡಿ.
4
ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಊಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಊಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು.
5
ನೀವು ಈ ಆಜ್ಞೆಗಳನ್ನು ಪಾಲಿಸದಿದ್ದರೆ ರಾಜನ ಅರಮನೆಯನ್ನು ನಾಶಮಾಡಲಾಗುವುದು. ಅದು ಕಲ್ಲುಘಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟುಕೊಂಡು ಹೇಳುತ್ತೇನೆ”‘ ಎಂದು ಯೆಹೋವನು ನುಡಿದನು.
6
ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಘನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.
7
ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಪ್ರತಿಯೊಬ್ಬನ ಹತ್ತಿರ ಆ ಮನೆಯನ್ನು ಹಾಳುಮಾಡಲು ಬೇಕಾಗುವ ಸಾಧನಗಳಿರುವವು. ಆ ಜನರು ನಿನ್ನ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನ್ನು ಕಡಿದುಹಾಕುತ್ತಾರೆ. ಅವರು ಆ ತೊಲೆಗಳನ್ನು ಬೆಂಕಿಯಲ್ಲಿ ಎಸೆಯುತ್ತಾರೆ.
8
“ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು? ಎಂದು ಒಬ್ಬರನೊಐಬ್ಬರು ಕೇಳುವರು.’
9
ಆ ಪ್ರಶೆಐಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಘಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.”‘
10
ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಊಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಊಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.
11
ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.
12
ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.”
13
ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೆ ಕೊಡುವದಿಲ್ಲ.
14
ಯೆಹೋಯಾಕೀಮನು, “ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ” ಎಂದು ಹೇಳುತ್ತಾನೆ. ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ. ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ. ಅದಕ್ಕೆ ಕೆಂಪು ಘಣ್ಣವನ್ನು ಬಳಿಯುತ್ತಾನೆ.
15
“ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಘಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.
16
ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, “ದೇವರನ್ನು ಅರಿತುಕೊಳ್ಳುವುದು ಎಂದರೇನು?” ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಙೇಕಾದದ್ದು ಅದೇ.” ಇದು ಯೆಹೋವನಿಂದ ಘಂದ ಸಂದೇಶ:
17
ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಊಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”
18
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.
19
ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.
20
“ಯೆಹೂದವೇ, ಲೆಘನೋನ್ ಪರ್ವತವನ್ನು ಹತ್ತಿ ಕೂಗಿಕೊ, ನಿನ್ನ ಧ್ವನಿಯು ಬಾಷಾನ್ ಪರ್ವತಗಳಲ್ಲಿ ಕೇಳಿಸಲಿ. ಅಬಾರೀಮಿನಲ್ಲಿ ಅರಚಿಕೊ; ಏಕೆಂದರೆ ನಿನ್ನ ‘ಪ್ರಿಯತಮರೆಲ್ಲರನ್ನೂ’ ನಾಶಮಾಡಲಾಗುವುದು.
21
“ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.
22
ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು. ಅದು ನಿನ್ನ ಎಲ್ಲಾ ಕುರುಬರನ್ನು (ನಾಯಕರನ್ನು) ಹಾರಿಸಿಕೊಂಡು ಹೋಗುವುದು. ಯಾವುದಾದರೂ ಬೇರೆ ಜನಾಂಗ ನಿನಗೆ ಸಹಾಯಮಾಡಘಹುದೆಂದು ನೀನು ಭಾವಿಸಿಕೊಂಡಿರುವೆ. ಆದರೆ ಆ ಜನಾಂಗಗಳನ್ನೂ ಸೋಲಿಸಲಾಗುವುದು. ಆಗ ನಿನಗೆ ನಿಜವಾಗಿಯೂ ಆಶಾಭಂಗವಾಗುವುದು. ನೀನು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವೆ.
23
“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಘನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”
24
ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಘಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.
25
ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ.
26
ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದುಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತು ಹೋಗುವಿರಿ.
27
ಯೆಹೋಯಾಚೀನನೇ, ನೀನು ನಿನ್ನ ದೇಶಕ್ಕೆ ಹಿಂದಿರುಗಙೇಕೆಂದು ಅಪೇಕ್ಷಿಸಿದರೂ ನಿನಗೆ ಬರಲು ಸಾಧ್ಯವಾಗದು.”
28
ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?
29
ದೇಶವೇ, ದೇಶವೇ, ಯೆಹೂದದ ದೇಶವೇ, ಯೆಹೋವನ ಸಂದೇಶವನ್ನು ಕೇಳು.
30
ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸಿಬಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನೆಐರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52