bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 29
Jeremiah 29
Kannada (ERV) 1997 (ಪರಿಶುದ್ದ ಬೈಬಲ್)
← Chapter 28
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 30 →
1
ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಘೂಕದೆಐಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.
2
(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಊಕಾರಿಗಳನ್ನು, ಮುಂದಾಳುಗಳನ್ನು, ಘಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)
3
ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಘೂಕದೆಐಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:
4
ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ತಾನು ಜೆರುಸಲೇಮಿನಿಂದ ಬಾಬಿಲೋನಿಗೆ ಬಂಧಿಗಳನ್ನಾಗಿ ಕಳುಹಿಸಿದ ಎಲ್ಲಾ ಜನರಿಗೆ ಈ ಮಾತುಗಳನ್ನು ಹೇಳುತ್ತಾನೆ.
5
“ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನ್ನು ಬೆಳೆಸಿರಿ ಮತ್ತು ನೀವು ಬೆಳೆಸಿದ ಆಹಾರವನ್ನು ಸೇವಿಸಿರಿ.
6
ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಘಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಙೇಡಿ.
7
ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”
8
ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಙೇಡಿ.
9
ಅವರು ಸುಳ್ಳುಗಳನ್ನು ಬೋಊಸುತ್ತಿರುವರು. ಅವರ ಸಂದೇಶವು ನನ್ನಿದ ಬಂದುದು ಎಂದು ಅವರು ಹೇಳುತ್ತಿರುವರು. ಆದರೆ ನಾನು ಅದನ್ನು ಕಳುಹಿಸಲಿಲ್ಲ.” ಈ ಸಂದೇಶವು ಯೆಹೋವನಿಂದ ಘಂದದ್ದು.
10
ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಘಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.
11
ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.
12
ಆಗ ನೀವು ನನ್ನಲ್ಲಿ ಮೊರೆಯಿಡುವಿರಿ. ನೀವು ನನ್ನಲ್ಲಿಗೆ ಬಂದು ನನ್ನನ್ನು ಪ್ರಾರ್ಥಿಸಿರಿ; ಆಗ ನಾನು ನಿಮಗೆ ಕಿವಿಗೊಡುವೆನು.
13
ನೀವು ನನ್ನನ್ನು ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
14
ನಾನು ನಿಮಗೆ ದೊರೆಯುವೆನು. ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಘಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.
15
“ಆದರೆ ಯೆಹೋವನು ನಮಗೆ ಬಾಬಿಲೋನಿನಲ್ಲಿಯೇ ಪ್ರವಾದಿಗಳನ್ನು ಕೊಟ್ಟಿದ್ದಾನೆ” ಎಂದು ನೀವು ಹೇಳಘಹುದು.
16
ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.
17
ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಙೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಊಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.
18
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಊಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಙೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
19
ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.
20
“ನೀವು ಬಂಧಿಗಳು. ನಾನು ನಿಮ್ಮನ್ನು ಜೆರುಸಲೇಮ್ ಬಿಟ್ಟು ಬಾಬಿಲೋನಿಗೆ ಹೋಗುವಂತೆ ಒತ್ತಾಯಿಸಿದೆ. ಆದ್ದರಿಂದ ಯೆಹೋವನ ಸಂದೇಶವನ್ನು ಕೇಳಿರಿ.”
21
ಕೊಲಾಯನ ಮಗನಾದ ಅಹಾಘ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿದ ಘಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸುವೆನು. ನೆಘೂಕದೆಐಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.
22
ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಘನ ಗತಿಯನ್ನು ಯೆಹೋವನು ನಿನಗೆ ತರಲಿ.’
23
ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಘಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.
24
(ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು.) ನೀನು ನೆಹೆಲಾಮ್ಯನಾದ ಶೆಮಾಯನಿಗೆ ಕೂಡ ಒಂದು ಸಂದೇಶವನ್ನು ಕೊಡು.
25
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.
26
ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲಿಬಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳ ಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಙೇಕು.
27
ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನ್ನು ಏಕೆ ಬಂಧಿಸಲಿಲ್ಲ?
28
ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: “ಬಾಬಿಲೋನಿನಲ್ಲಿರುವ ನೀವು ಅಲ್ಲಿ ಘಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಘಳಸಿರಿ.”‘
29
ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.
30
ಆಗ ಯೆರೆಮೀಯನಿಗೆ ಯೆಹೋವನ ಸಂದೇಶವು ಘಂದಿತು.
31
“ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.
32
ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಘವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.”‘ ಇದು ಯೆಹೋವನ ನುಡಿ. ‘“ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.”
← Chapter 28
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 30 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52