bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 50
Jeremiah 50
Kannada (ERV) 1997 (ಪರಿಶುದ್ದ ಬೈಬಲ್)
← Chapter 49
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 51 →
1
ಬಾಬಿಲೋನ್ ಮತ್ತು ಬಾಬಿಲೋನಿನ ಜನರ ಬಗ್ಗೆ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಯೆಹೋವನು ಯೆರೆಮೀಯನ ಮುಖಾಂತರ ಕೊಟ್ಟನು.
2
“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನೆಐಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಙೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’
3
ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”
4
ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಘಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.
5
ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಘಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.
6
“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.
7
ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.
8
“ಬಾಬಿಲೋನಿನಿಂದ ಓಡಿಹೋಗಿರಿ. ಬಾಬಿಲೋನಿನ ಪ್ರದೇಶವನ್ನು ಬಿಟ್ಟುಬಿಡಿ. ಕುರಿಮಂದೆಯ ಮುಂದೆ ಹೋಗುವ ಹೋತದಂತೆ ಹೋಗಿರಿ.
9
ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.
10
ಕಸ್ದೀಯ ಸಂಪತ್ತನೆಐಲ್ಲ ಶತ್ರು ಕೊಳ್ಳೆಹೊಡೆಯುವನು. ಶತ್ರು ಸೈನಿಕರು ತಮಗೆ ಙೇಕಾದದ್ದೆಲ್ಲವನ್ನು ತೆಗೆದುಕೊಳ್ಳುವರು” ಇದು ಯೆಹೋವನ ನುಡಿ.
11
“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.
12
“ಈಗ ನಿನ್ನ ತಾಯಿಯು ಘಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.
13
ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. “ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.
14
“ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.
15
ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.
16
ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಙೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.
17
“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು.”
18
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: “ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಘಹುಬೇಗ ದಂಡಿಸುವೆನು. ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.
19
ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.”
20
ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತಿಐಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತಐ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನೆಐಲ್ಲ ಕ್ಷಮಿಸಿದ್ದೇನೆ.”
21
ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.
22
“ಯುದ್ಧದ ಆರ್ಭಟವು ದೇಶದಲ್ಲೆಲ್ಲ ಕೇಳಿಬರುತ್ತಿದೆ. ಅದು ಮಹಾವಿನಾಶದ ಧ್ವನಿಯಾಗಿದೆ.
23
ಬಾಬಿಲೋನು ಇಡೀ ಭೂಮಂಡಲಕ್ಕೆ ‘ಸುತ್ತಿಗೆ’ಯಂತಿದೆ. ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ.
24
ಬಾಬಿಲೋನೇ, ನಾನು ನಿನಗಾಗಿ ಒಂದು ಘಲೆಯನ್ನು ಒಡ್ಡಿದೆ. ನೀನು ತಿಳಿಯದೆ ಸಿಕ್ಕಿಹಾಕಿಕೊಂಡೆ. ನೀನು ಯೆಹೋವನ ವಿರುದ್ಧ ಹೋರಾಡಿದೆ. ಆದ್ದರಿಂದ ನಿನ್ನನ್ನು ಹುಡುಕಿ ವಶಪಡಿಸಿಕೊಳ್ಳಲಾಯಿತು.
25
ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಙೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಙೇಕಾದ ಕಾರ್ಯವೊಂದಿದೆ.
26
“ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.
27
ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಘಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.
28
ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.
29
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಙೇಕು.
30
“ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಹೀಗೆನ್ನುತ್ತಾನೆ:
31
“ಬಾಬಿಲೋನೇ, ನೀನು ತುಂಬಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ದಂಡಿಸುವ ಸಮಯ ಘಂದಿದೆ.
32
ದುರಹಂಕಾರಿಯಾದ ಬಾಬಿಲೋನ್ ಎಡವಿಬೀಳುವುದು. ಅದನ್ನು ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. ಅದರ ಪಟ್ಟಣಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಆ ಬೆಂಕಿಯು ಅದರ ಸುತ್ತಮುತ್ತಲಿನ ಎಲ್ಲರನ್ನೂ ಸುಟ್ಟುಬಿಡುವದು.”
33
ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ.
34
ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”
35
ಯೆಹೋವನು ಹೀಗೆನ್ನುತ್ತಾನೆ: “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, ಅಊಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು!
36
ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! ಅವರು ಮೂರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು.
37
ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶಬರ್ಯವು ಸೂರೆಗೊಳ್ಳುವುದು.
38
ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಘತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.
39
“ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.
40
ದೇವರು ಸೊದೋಮ್ ಗೊಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.
41
“ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. ಅವರು ಒಂದು ಪ್ರಘಲ ರಾಷ್ಟ್ರದಿಂದ ಬರುತ್ತಿದ್ದಾರೆ. ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ.
42
ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.
43
ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಘಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”
44
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಘನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”
45
ಯೆಹೋವನು ಬಾಬಿಲೋನಿನ ವಿರುದ್ಧ ಮಾಡಙೇಕೆಂದಿರುವುದನ್ನು ಕೇಳಿರಿ. ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.
46
ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.
← Chapter 49
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 51 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52