bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 7
Jeremiah 7
Kannada (ERV) 1997 (ಪರಿಶುದ್ದ ಬೈಬಲ್)
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 8 →
1
ಯೆರೆಮೀಯನಿಗೆ ಯೆಹೋವನ ಸಂದೇಶ ಹೀಗಿತ್ತು:
2
“ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು: ‘“ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಊಸಲು ಈ ದ್ವಾರದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ.
3
ಯೆಹೋವನು ಇಸ್ರೇಲರ ದೇವರು. ಸರ್ವಶಕ್ತನಾದ ದೇವರು ಹೀಗೆ ಹೇಳುತ್ತಾನೆ: ನಿಮ್ಮ ನಡತೆಯನ್ನು ಘದಲಾಯಿಸಿರಿ; ಒಳ್ಳೆಯದನ್ನು ಮಾಡಿರಿ. ಆಗ ನೀವು ಇಲ್ಲಿರಲು ಆಸ್ಪದ ಕೊಡುತ್ತೇನೆ.
4
ಕೆಲವರು ಹೇಳುವ ಸುಳ್ಳುಗಳನ್ನು ನಂಘಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.
5
ನೀವು ನಿಮ್ಮ ನಡತೆಯನ್ನು ಘದಲಾಯಿಸಿ ಸತ್ಕಾರ್ಯಗಳನ್ನು ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ಪದಕೊಡುತ್ತೇನೆ. ನೀವು ಒಬ್ಬರಿಗೊಬ್ಬರು ನ್ಯಾಯವಾದ ರೀತಿಯಲ್ಲಿ ವ್ಯವಹರಿಸಬೇಕು.
6
ಅಪರಿಚಿತರೊಂದಿಗೂ ನೀವು ನ್ಯಾಯಘದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.
7
ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸಾಬಸ್ತ್ಯವಾಗಿ ಕೊಟ್ಟಿದ್ದೇನೆ.
8
‘“ನೀವು ಸುಳ್ಳುಗಳನ್ನು ನಂಬುತ್ತಿದ್ದೀರಿ, ಆ ಸುಳ್ಳುಗಳು ಹುರುಳಿಲ್ಲದವುಗಳಾಗಿವೆ.
9
ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?
10
ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಘಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಘಹುದೆಂದು ಭಾವಿಸಿರುವಿರಾ?
11
ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನೆಐಲ್ಲ ನೋಡುತ್ತಿದ್ದೇನೆ”‘ ಎಂಬುದು ಯೆಹೋವನಾದ ನನ್ನ ನುಡಿ.
12
“ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.
13
“ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.
14
ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.
15
ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿದ ದೂರ ಎಸೆದುಬಿಡುವೆನು.”
16
“ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಙೇಡ; ಇವರಿಗಾಗಿ ಮೊರೆಯಿಡಬೇಡ; ಇವರಿಗಾಗಿ ಬೇಡಿಕೊಳ್ಳಙೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ.
17
ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು.
18
“ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.
19
ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.
20
ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”
21
ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಘಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.
22
ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆಯಾಗಲಿ ಯಜ್ಞಗಳ ಬಗ್ಗೆಯಾಗಲಿ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ.
23
ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನೆಐಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.
24
“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಘಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.
25
ನಿಮ್ಮ ಪೂರ್ವಿಕರು ಈಜಿಪ್ಟನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.
26
ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.
27
“ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ.
28
ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.
29
“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಊಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.
30
ನೀನು ಹಾಗೆ ಮಾಡಲೇಙೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದೆಬಷೀಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.
31
ಯೆಹೂದದ ಜನರು ಬೆನ್ಹಿನೊಐಮ್ ತಗ್ಗಿನಲ್ಲಿ ತೋಫೆತೆಂಘ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಙೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಘಂದಿಲ್ಲ.
32
ಹೀಗಿರಲು ನಾನು ಈ ಕಣಿವೆಯನ್ನು ತೋಫೆತ್ ಮತ್ತು ಬೆನ್ಹಿನೊಐಮೀನ ಕಣಿವೆ ಎಂದು ಕರೆಯದೆ ಇದನ್ನು ಸಂಹಾರದ ಕಣಿವೆ ಎಂದು ಕರೆಯುವ ದಿನಗಳು ಬರುತ್ತಿವೆ ಎಂಬ ಎಚ್ಚರಿಕೆಯನ್ನು ಕೊಡುತ್ತೇನೆ.” ಇದು ಯೆಹೋವನು ಹೇಳಿದ ಮಾತು. “ಶವಗಳನ್ನು ಹೂಳುವದಕ್ಕೆ ಕೊಂಚವೂ ಸ್ಥಳ ಇಲ್ಲದಂತಾಗುವವರೆಗೆ ತೋಫೆತಿನಲ್ಲಿ ಶವಗಳನ್ನು ಹೂಳುವ ಕಾರಣ ಅದಕ್ಕೆ ಈ ಹೆಸರನ್ನು ಕೊಡಲಾಗುವುದು.
33
ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.
34
“ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52