bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jonah 3
Jonah 3
Kannada (ERV) 1997 (ಪರಿಶುದ್ದ ಬೈಬಲ್)
← Chapter 2
Jump to:
Chapter 1
Chapter 2
Chapter 3
Chapter 4
Chapter 4 →
1
ಯೆಹೋವನು ಯೋನನ ಸಂಗಡ ತಿರುಗಿ ಮಾತನಾಡಿದನು. ಆತನು ಹೇಳಿದ್ದೇನೆಂದರೆ,
2
“ಮಹಾನಗರವಾದ ನಿನೆವೆಗೆ ನೀನು ಎದ್ದುಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.”
3
ಯೋನನು ಯೆಹೋವನ ಆಜ್ಞೆಗೆ ವಿಧೇಯನಾಗಿ ನಿನೆವೆಗೆ ಬಂದನು. ನಿನೆವೆಯು ಬಹು ವಿಶಾಲವಾದ ಪಟ್ಟಣ. ಅದು ಮೂರು ದಿನಗಳ ಪ್ರಯಾಣದಷ್ಟು ದೊಡ್ಡದಿತ್ತು.
4
ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನೆವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು.
5
ನಿನೆವೆಯ ಜನರು ದೇವರಿಂದ ಬಂದ ಸಂದೇಶವನ್ನು ನಂಬಿದರು. ಆ ಜನರು ತಮ್ಮ ಪಾಪಗಳ ಕುರಿತು ಯೋಚಿಸಲು ಉಪವಾಸ ಮಾಡಿದರು. ತಮ್ಮ ಪಶ್ಚಾತ್ತಾಪಕ್ಕೆ ಗುರುತಾಗಿ ಶೋಕವಸ್ತ್ರವನ್ನು ಧರಿಸಿದರು. ನಗರದ ಎಲ್ಲಾ ಜನರು ಹೀಗೆ ಮಾಡಿದರು. ಉನ್ನತ ಅಧಿಕಾರಿಗಳಿಂದ ಹಿಡಿದು ಕೀಳು ಜನರ ತನಕ ಹಾಗೆ ಮಾಡಿದರು.
6
ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.
7
ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: “ಸ್ವಲ್ಪ ಸಮಯದವರೆಗೆ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಆಹಾರವನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾರೂ ಊಟಮಾಡಬಾರದು, ನೀರು ಕುಡಿಯಬಾರದು.
8
ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು.
9
ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!”
10
ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.
← Chapter 2
Jump to:
Chapter 1
Chapter 2
Chapter 3
Chapter 4
Chapter 4 →
All chapters:
1
2
3
4