Joshua 5

Kannada (ERV) 1997 (ಪರಿಶುದ್ದ ಬೈಬಲ್‌)

← Chapter 4 Chapter 6 →
4ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು. (Verses 4-7)
← Chapter 4 Chapter 6 →