Judges 21

Kannada (ERV) 1997 (ಪರಿಶುದ್ದ ಬೈಬಲ್‌)

← Chapter 20
22ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.
← Chapter 20