bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Luke 20
Luke 20
Kannada (ERV) 1997 (ಪರಿಶುದ್ದ ಬೈಬಲ್)
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 21 →
1
ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,
2
“ನಮಗೆ ಹೇಳು! ನೀನು ಯಾವ ಅಧಿಕಾರದಿಂದ ಈ ಸಂಗತಿಗಳನ್ನು ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು?” ಎಂದು ಕೇಳಿದರು.
3
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ.
4
ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು.
5
ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.
6
‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.
7
ಬಳಿಕ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು.
8
ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು.
9
ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
10
ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
11
ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
12
ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆ ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು.
13
“ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.
14
ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.
15
ಬಳಿಕ ಆ ಮಗನನ್ನು ತೋಟದಿಂದ ಹೊರಕ್ಕೆ ನೂಕಿಕೊಂಡು ಹೋಗಿ ಕೊಂದುಹಾಕಿದರು. “ಆಗ ತೋಟದ ಯಜಮಾನನು ಏನು ಮಾಡುವನು?
16
ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.
17
ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ,
18
ಆ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು.
19
ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.
20
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
21
ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!
22
ಈಗ ಹೇಳು, ನಾವು ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ತಪ್ಪೋ?” ಎಂದು ಕೇಳಿದರು.
23
ಆದರೆ ಈ ಜನರು ತನಗೆ ಮೋಸಮಾಡಲು ಪ್ರಯತ್ನಿಸುತ್ತಿದ್ದಾರೆಂದು ಯೇಸುವಿಗೆ ತಿಳಿದಿತ್ತು.
24
ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು.
25
ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.
26
ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.
27
ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ,
28
“ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಬರೆದಿದ್ದಾನಷ್ಟೆ.
29
ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ.
30
ಆಗ ಎರಡನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು.
31
ಆಗ ಮೂರನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು. ಬಳಿಕ ಅವನೂ ಸತ್ತುಹೋದನು. ಇನ್ನುಳಿದ ಸಹೋದರರಿಗೂ ಹೀಗೆಯೇ ಆಯಿತು. ಅವರೆಲ್ಲರೂ ಮಕ್ಕಳಿಲ್ಲದೆ ಸತ್ತರು.
32
ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
33
ಆದರೆ ಆ ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿದ್ದರು. ಹೀಗಿರಲಾಗಿ, ಸತ್ತವರು ಪುನರುತ್ಥಾನ ಹೊಂದುವಾಗ, ಆ ಸ್ತ್ರೀಯು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.
34
ಯೇಸು ಸದ್ದುಕಾಯರಿಗೆ, “ಭೂಲೋಕದಲ್ಲಿ ಜನರು ಒಬ್ಬರನ್ನೊಬ್ಬರು ಮದುವೆ ಆಗುತ್ತಾರೆ.
35
ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.
36
ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.
37
ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
38
ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.
39
ಧರ್ಮೋಪದೇಶಕರಲ್ಲಿ ಕೆಲವರು, “ಬೋಧಕನೇ, ನೀನು ಒಳ್ಳೆಯ ಉತ್ತರವನ್ನು ಕೊಟ್ಟಿರುವೆ” ಎಂದು ಹೇಳಿದರು.
40
ಇನ್ನೊಂದು ಪ್ರಶ್ನೆಯನ್ನು ಆತನಿಗೆ ಕೇಳುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
41
ಆಗ ಯೇಸು, “ಕ್ರಿಸ್ತನು ದಾವೀದನ ಮಗನೆಂದು ಜನರು ಏಕೆ ಹೇಳುತ್ತಾರೆ?
42
ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ:
43
ನಾನು ನಿನ್ನ ವೈರಿಗಳನ್ನು ನಿನ್ನ ಪಾದಪೀಠವನ್ನಾಗಿ ಮಾಡುವ ತನಕ
44
ದಾವೀದನು ಕ್ರಿಸ್ತನನ್ನು ‘ಪ್ರಭು’ವೆಂದು ಕರೆದ ಮೇಲೆ ಆತನು ಅವನಿಗೆ ಮಗನಾಗಲು ಹೇಗೆ ಸಾಧ್ಯ?” ಎಂದು ಹೇಳಿದನು.
45
ಜನರೆಲ್ಲರೂ ಯೇಸುವಿನ ಮಾತನ್ನು ಆಲಿಸಿದರು. ಯೇಸು ತನ್ನ ಶಿಷ್ಯರಿಗೆ,
46
“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.
47
ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24