Nehemiah 10

Kannada (ERV) 1997 (ಪರಿಶುದ್ದ ಬೈಬಲ್‌)

← Chapter 9 Chapter 11 →
28ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು. (Verses 28-29)
← Chapter 9 Chapter 11 →