bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Numbers 1
Numbers 1
Kannada (ERV) 1997 (ಪರಿಶುದ್ದ ಬೈಬಲ್)
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 2 →
1
ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
2
“ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ,
3
ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು.
4
ಪ್ರತಿಯೊಂದು ಕುಲದ ಕುಟುಂಬದ ನಾಯಕನು ನಿಮಗೆ ಸಹಾಯಮಾಡಬೇಕು
5
ನಿಮ್ಮೊಡನಿದ್ದು ನಿಮಗೆ ಸಹಾಯಮಾಡುವ ಪುರುಷರು ಯಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್.
6
ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್;
7
ಯೆಹೂದ ಕುಲದಿಂದ ಅಮ್ಮೀನಾದ್ವಾನ ಮಗನಾದ ನಹಶೋನ್;
8
ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್;
9
ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್;
10
ಯೋಸೇಫನ ಸಂತಾನದಿಂದ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ; ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್;
11
ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್;
12
ದಾನ್ ಕುಲದಿಂದ ಅಮ್ಮಾಷದ್ದೈಯ ಮಗನಾದ ಅಹೀಗೆಜೆರ್;
13
ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್;
14
ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್;
15
ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”
16
ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು.
17
ಹೆಸರೆಸರಾಗಿ ಆರಿಸಲ್ಪಟ್ಟ ಈ ಜನರನ್ನು ಮೋಶೆ ಆರೋನರು ತೆಗೆದುಕೊಂಡರು.
18
ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.
19
ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.
20
ಅವರು ಇಸ್ರೇಲನ ಚೊಚ್ಚಲ ಮಗನಾದ ರೂಬೇನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿ ಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಹೆಸರುಗಳನ್ನು ಪಟ್ಟಿಮಾಡಲಾಯಿತು.
21
ರೂಬೇನ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 46,500.
22
ಅವರು ಸಿಮೆಯೋನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
23
ಸಿಮೆಯೋನ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 59,300.
24
ಗಾದ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
25
ಗಾದ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 45,650.
26
ಯೆಹೂದನ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿಯೂ ಕುಟುಂಬಗಳಿಗನುಸಾರವಾಗಿಯೂ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
27
ಯೆಹೂದನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 74,600.
28
ಇಸ್ಸಾಕಾರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
29
ಇಸ್ಸಾಕಾರ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 54,400.
30
ಜೆಬುಲೂನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
31
ಜೆಬುಲೂನ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 57,400.
32
ಯೋಸೇಫನ ಮಗನಾದ ಎಫ್ರಾಯೀಮ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
33
ಎಫ್ರಾಯೀಮ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 40,500.
34
ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
35
ಮನಸ್ಸೆ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 32,200.
36
ಬೆನ್ಯಾಮೀನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
37
ಬೆನ್ಯಾಮೀನನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 35,400.
38
ದಾನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
39
ದಾನನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 62,700.
40
ಆಶೇರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
41
ಆಶೇರ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 41,500.
42
ನಫ್ತಾಲಿ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
43
ನಫ್ತಾಲಿಯ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 53,400.
44
ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಈ ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.)
45
ಅವರು ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿ ಪುರುಷನನ್ನು ಲೆಕ್ಕಿಸಿದರು. ಪ್ರತಿಯೊಬ್ಬನೂ ಅವನ ಕುಟುಂಬದೊಡನೆ ಲೆಕ್ಕಿಸಲ್ಪಟ್ಟನು.
46
ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 6,03,550.
47
ಆದರೆ ಲೇವಿ ಕುಲದ ಕುಟುಂಬಗಳು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ.
48
ಯಾಕೆಂದರೆ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
49
“ಲೇವಿ ಕುಲದ ಪುರುಷರನ್ನು ಲೆಕ್ಕಿಸಬೇಡ. ಅವರನ್ನು ಉಳಿದ ಇಸ್ರೇಲರ ಜನಗಣತಿಯೊಡನೆ ಸೇರಿಸಬಾರದು.
50
ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.
51
ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.
52
ಇಸ್ರೇಲರ ಆಯಾ ದಂಡುಗಳು ತಮ್ಮತಮ್ಮ ಕುಲದ ಧ್ವಜ ಇರುವಲ್ಲಿಯೇ ಪಾಳೆಯ ಮಾಡಿಕೊಳ್ಳಬೇಕು.
53
ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”
54
ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36