bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Song of Solomon 5
Song of Solomon 5
Kannada (ERV) 1997 (ಪರಿಶುದ್ದ ಬೈಬಲ್)
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 6 →
1
ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!
2
ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”
3
“ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.”
4
ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು.
5
ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು.
6
ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.
7
ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.
8
ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.
9
ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?
10
ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.
11
ಅವನ ತಲೆಯು ಚೊಕ್ಕ ಬಂಗಾರದಂತಿದೆ; ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ.
12
ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ.
13
ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.
14
ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.
15
ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.
16
ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 6 →
All chapters:
1
2
3
4
5
6
7
8