bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Song of Solomon 8
Song of Solomon 8
Kannada (ERV) 1997 (ಪರಿಶುದ್ದ ಬೈಬಲ್)
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
1
ನೀನು ನನ್ನ ಅಣ್ಣನ ಹಾಗಿದ್ದರೆ, ತಾಯಿ ಹಾಲನ್ನು ಕುಡಿಯುವ ಮಗುವಿನಂತೆ ಇದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ನಾನು ನಿನ್ನನ್ನು ಹೊರಗೆ ಕಂಡು ನಿನಗೆ ಮುದ್ದಿಡುತ್ತಿದ್ದೆನು; ಆಗ ಯಾರೂ ನನ್ನ ಮೇಲೆ ದೋಷಾರೋಪಣೆ ಮಾಡುತ್ತಿರಲಿಲ್ಲ!
2
ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆನು.
3
ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳುತ್ತಿತ್ತು.
4
ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸುವುದಿಲ್ಲವೆಂದು ನನಗೆ ಪ್ರಮಾಣ ಮಾಡಿರಿ.
5
ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು? ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ.
6
ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.
7
ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು; ನದಿಗಳು ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟುಬಿಟ್ಟರೆ ಅವನು ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.
8
ನಮಗೆ ಚಿಕ್ಕ ತಂಗಿಯಿದ್ದಾಳೆ, ಆಕೆಯ ಸ್ತನಗಳು ಇನ್ನೂ ಬೆಳೆದಿಲ್ಲ. ಆಕೆಯ ನಿಶ್ಚಿತಾರ್ಥ ದಿನದಲ್ಲಿ ನಮ್ಮ ತಂಗಿಗೋಸ್ಕರ ನಾವೇನು ಮಾಡಬೇಕು?
9
ಆಕೆ ಕೋಟೆಯಾಗಿದ್ದರೆ ಅದರ ಮೇಲೆ ಬೆಳ್ಳಿಯ ಗೋಪುರಗಳನ್ನು ಕಟ್ಟುತ್ತಿದ್ದೆವು. ಆಕೆ ಬಾಗಿಲಾಗಿದ್ದರೆ, ಶ್ರೇಷ್ಠವಾದ ದೇವದಾರು ಮರದ ಹಲಗೆಗಳಿಂದ ಅದನ್ನು ಹೊದಿಸುತ್ತಿದ್ದೆವು.
10
ನಾನು ಕೋಟೆ; ನನ್ನ ಸ್ತನಗಳೇ ಅದರ ಗೋಪುರಗಳು. ಹೀಗೆ ಸೊಲೊಮೋನನು ನನ್ನಲ್ಲಿ ತೃಪ್ತನಾದನು.
11
ಸೊಲೊಮೋನನಿಗೆ ಬಾಲ್ಹಾಮೋನಿನಲ್ಲಿ ದ್ರಾಕ್ಷಿತೋಟವಿತ್ತು. ಅವನು ಅದನ್ನು ರೈತರಿಗೆ ಒಪ್ಪಿಸಿದನು. ಪ್ರತಿಯೊಬ್ಬನು ಹಣ್ಣಿಗಾಗಿ ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಡಬೇಕಿತ್ತು.
12
ಆದರೆ ನನ್ನ ಸ್ವಂತ ದ್ರಾಕ್ಷಿತೋಟವು ನನ್ನೆದುರಿನಲ್ಲಿದೆ. ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ.
13
ಉದ್ಯಾನವನಗಳಲ್ಲಿ ವಾಸಿಸುವವಳೇ, ಗೆಳೆಯರು ನಿನ್ನ ಸ್ವರ ಕೇಳಬೇಕೆಂದಿದ್ದಾರೆ, ನನಗೂ ಸಹ ಕೇಳಿಸಲಿ.
14
ನನ್ನ ಪ್ರಿಯನೇ, ತ್ವರೆಪಡು. ಸುಗಂಧಸಸ್ಯ ಪರ್ವತಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
All chapters:
1
2
3
4
5
6
7
8